ಪತ್ರಕರ್ತರ ತುರ್ತು ನಿಧಿ

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ,

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ,

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ- ಪುರುರಾಜ ಸಿಂಗ್ ಸೋಲಂಕಿ.

ರಾಯಚೂರು,ಡಿ.25- ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ ಸಾಧ್ಯವೆಂದು ಪ್ರೋಬೆಷನರಿ ಐಎಎಸ್ ಅಧಿಕಾರಿ ಪುರುರಾಜ ಸಿಂಗ್ ಸೋಲಂಕಿ ಹೇಳಿದರು. ಅವರಿಂದು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ರಿಪೋರ್ಟ್ಸ್ ಗಿಲ್ಡ್ ಹಾಗು ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರು ತಮ್ಮ ದಿನ ನಿತ್ಯದ ಯಾಂತ್ರಿಕ ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧಿಸಲು ಕ್ರೀಡೆ ಅತ್ಯಂತ ಸಹಕಾರಿಯಾಗಿದ್ದು ನಾವೆಲ್ಲರೂ ನಮ್ಮ ಬಿಡುವಿನ ಸಮಯದಲ್ಲಿ ಕ್ರೀಡೆಗಳಲ್ಲಿ ತೊಡಗಬೇಕೆಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಾಹಿತಿ ಆಯೋಗದ ಕಲಬುರ್ಗಿ ಪೀಠದ ಆಯುಕ್ತರಾದ ಬಿ.ವೆಂಕಟಸಿಂಗ್ ಮಾತನಾಡಿ ಕ್ರೀಡೆ ನಮ್ಮ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಪತ್ರಕರ್ತರು ತಮ್ಮ ದಿನ ನಿತ್ಯದ ಸುದ್ದಿ ಸಂಗ್ರಹ ಜಂಜಾಟದಲ್ಲಿ ತೊಡಗಿರುತ್ತಾರೆ ಅವರು ಒತ್ತಡ ಜೀವನದಿಂದ ಹೊರಬರಲು ಕ್ರೀಡೆ ಅತಿಮುಖ್ಯವೆಂದು ಅಭಿಪ್ರಾಯಪಟ್ಟ ಅವರು ನಾನು ಸಹ ಪತ್ರಕರ್ತ ವೃತ್ತಿಯಲ್ಲಿರುವ ಸಂದರ್ಭದಲ್ಲಿ ಪ್ರತಿ ವರ್ಷ ಆಯೋಜಿಸುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿದ್ದೆ ಎಂದರು.

ಮತ್ತೋರ್ವ ಅತಿಥಿಗಳಾದ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಸ್ವಾಮಿ ಮಾತನಾಡಿ ಕ್ರೀಡೆಯಿಂದ ಒತ್ತಡದ ಜೀವನದಿಂದ ಮುಕ್ತಿ ಹೊಂದಲು ಸಾಧ್ಯವಾಗುತ್ತದೆ ಎಂದರು.

ರಾಯಚೂರು ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು

ಸದಾ ಸುದ್ದಿಯ ಒತ್ತಡದಲ್ಲಿರುವ ಪತ್ರಕರ್ತರು ದೈಹಿಕ ಹಾಗೂ ಮಾನಸಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಈ ರೀತಿಯ ಕ್ರೀಡಾಕೂಟದಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸುವುದರಿಂದ ಒತ್ತಡಗಳಿಂದ ದೂರವಾಗಬಹುದು, ಉತ್ಸುಕತೆಯಿಂದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದರು. ಪಾತಾಳದಲ್ಲಿ ಅಡಗಿರುವ ವಿಷಯಗಳನ್ನು ಹೊರತೆಗೆಯುವ ಸಾಮರ್ಥ್ಯ ಪತ್ರಕರ್ತರಿಗಿದೆ. ನಮಗೇ ತಿಳಿಯದ ಎಷ್ಟೋ ವಿಷಯಗಳು ನಿಮ್ಮಿಂದ ತಿಳಿಯುತ್ತವೆ. ವೃತ್ತಿಯ ಜೊತೆ ಕ್ರೀಡಾ ಚಟುವಟಿಯಲ್ಲಿ ತೊಡಗಿರುವುದು ಸಂತಸದ ವಿಷಯ ಅಂತ ಜಿಪಂ ಸಿಇಓ ಈಶ್ವರ ಕುಮಾರ್ ಕಾಂದೂ ಹೇಳಿದರು.
ರಾಯಚೂರು ರಿಪೋರ್ಟ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್ ಮಾತನಾಡಿ ಕ್ರೀಡೆಯಿಂದ ನಾವು ಲವಲವಿಕೆಯಿಂದಿರಲು ಸಾಧ್ಯ ಪ್ರತಿ ವರ್ಷ ಪತ್ರಕರ್ತರಿಗೆ ಕ್ರೀಡಾಕೂಟ ಆಯೋಜಿಸುತ್ತಾ ಬರಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘದ ಅಧ್ಯಕ್ಷರಾದ ಚೆನ್ನಬಸವ ಬಾಗಲವಾಡ , ರಿಪೋರ್ಟ್ರ್ಸ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹೂಗಾರ್, ಖಜಾಂಚಿ ಸಣ್ಣ ಈರಣ್ಣ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಖಾನ್ ಸಾಬ್ ಮೋಮಿನ್, ಕ್ರೀಡಾ ವಸ್ತುವಾರಿಗಳಾದ ಶ್ರೀಕಾಂತ ಸಾವೂರು, ರಿಪೋರ್ಟ್ ಗಿಲ್ಡ್ ನಿಕಟಪೂರ್ವ ಅಧ್ಯಕ್ಷ ಚೆನ್ನಬಸವಣ್ಣ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣಾ ಶಾವಂತಗೇರಿ ಸೇರಿದಂತೆ ಹಿರಿಯ ಕಿರಿಯ ಪತ್ರಕರ್ತರು, ಅನೇಕರು ಇದ್ದರು.

ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್ ತಂಡ , ಜಿಲ್ಲಾ ಸರ್ಕಾರಿ ನೌಕರರ ತಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ತಂಡ, ಅರಣ್ಯ ಇಲಾಖೆ ತಂಡ , ನ್ಯಾಯವಾದಿಗಳ ತಂಡ, ಕೆಎಸ್‌ಆರ್‌ಟಿಸಿ ಅಧಿಕಾರಿಗಳ ತಂಡ, ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರ ತಂಡ ಮತ್ತು ಮುದ್ರಣ ಮಾಧ್ಯಮ ಪತ್ರಕರ್ತರ ತಂಡಗಳು ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ.

ಹಂಚಿಕೊಳ್ಳಿ:

Leave A Comment