ಶ್ರೀ ಎಂ. ಜಯರಾಮ
ಎಂ.ಜಯರಾಮ್ ಮೂಲತಃ ರಾಯಚೂರಿನ ರಾಂಪುರದವರು. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಚಿನ್ನದ ಪದಕದೊಂದಿಗೆ ಎಂ.ಫಿಲ್ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕಳೆದ 26 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸುದ್ದಿಮೂಲ ದಿನಪತ್ರಿಕೆಯಲ್ಲಿ 15 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಕಳೆದ 10 ವರ್ಷಗಳಿಂದ ರಾಯಚೂರು ವಾಣಿ ದಿನಪತ್ರಿಕೆಯಲ್ಲಿ ವರದಿಗಾರರಾಗಿ ಹಾಗೂ ಸಂಪಾದಕೀಯ ವಿಭಾಗದಲ್ಲಿ
ಕಾರ್ಯನಿರ್ವಹಿಸುತ್ತಿದ್ದಾರೆ.
2011 ರಲ್ಲಿ ಗುಲ್ಬರ್ಗಾ ವಿವಿಯಿಂದ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಜಯತೀರ್ಥ ರಾಜಪುರೋಹಿತ ಸ್ಮಾರಕ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಜಯರಾಮ್ ಅವರ ‘ದಾರಿತಪ್ಪಿದವರು’ ಕತೆಗೆ ಪ್ರಥಮ ಬಹುಮಾನ ಚಿನ್ನದ ಪದಕ ದೊರೆತಿದೆ.
ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಸಂಸ್ಥಾಪಕ ಸದಸ್ಯರಾದ ಶ್ರೀಯುತರು ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಸದ್ಯ ಗಿಲ್ಡ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Contact : 8971451949
Email ID : mjram123@gmail.com
