ಶ್ರೀ ಚಂದ್ರಕಾಂತ ಮಸಾನಿ
ಚಂದ್ರಕಾಂತ ಮಸಾನಿ ಮೂಲತ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯವರು. ದಾಂಡೇಲಿಯ ಬಂಗೂರನಗರ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಅಭ್ಯಾಸ ಮಾಡಿದ್ದಾರೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಇದೇ ಅವಧಿಯಲ್ಲಿ ಕಂಪ್ಯೂಟರ್ ಡಿಪ್ಲೊಮಾ ಹಾಗೂ ಎಲೆಕ್ಟ್ರಿಕಲ್ ಡಿಪ್ಲೊಮಾ ಪೂರೈಸಿದ್ದಾರೆ.
ಕನ್ನಡ, ಹಿಂದಿ, ಮರಾಠಿ, ಇಂಗ್ಲಿಷ್, ಭೋಜಪುರಿ ಹಾಗೂ ಬಂಗಾಲಿ ಭಾಷೆಯ ಮೇಲೆ ಹಿಡಿತ ಹೊಂದಿದ್ದಾರೆ. ಪ್ರಸ್ತುತ ರಾಯಚೂರು ಜಿಲ್ಲೆಯ ಪ್ರಜಾವಾಣಿಯ ಹಿರಿಯ ವರದಿಗಾರರಾಗಿರುವ ಇವರು 19 ವರ್ಷಗಳಿಂದ ಪ್ರಜಾವಾಣಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಒಟ್ಟು 29 ವರ್ಷಗಳ ಸೇವೆ ಸಲ್ಲಿಸಿದ್ದಾರೆ.
ವಿವಿಧ ಪತ್ರಿಕೆಗಳಲ್ಲಿ ಇವರ ಎರಡು ಸಾವಿರಕ್ಕೂ ಅಧಿಕ ಲೇಖನಗಳು ಪ್ರಕಟವಾಗಿವೆ. ಪತ್ರಿಕೋದ್ಯಮದ ಸಾರ್ಥಕ ಸೇವೆಗೆ ಅಂತರರಾಜ್ಯ, ರಾಜ್ಯ ಮಟ್ಟದ ಪ್ರಶಸ್ತಿಗಳನ್ನ ಪಡೆದಿದ್ದಾರೆ. ಪ್ರಸ್ತುತ ರಾಯಚೂರು ರಿಪೋರ್ಟರ್ಸ್ ಗಿಲ್ಡ್ನ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Contact : 9448470163
Email ID : pvraichur@prajavani.co.in
