ಕಾರ್ಯಕಾರಣಿ ಸಮಿತಿ ಸದಸ್ಯ
ರಾಚಯ್ಯ ಸ್ವಾಮಿ ಮಾಚನೂರು
ಮೂಲತಃ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಮಾಚನೂರು ಗ್ರಾಮದವರಾದ ರಾಚಯ್ಯ ಸ್ವಾಮಿ ಸ್ಥಾವರಮಠ ಕಳೆದ 8 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಯಚೂರಿನ ಸ್ಪಿಲ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಪಡೆದಿದ್ದು, ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ್ದಾರೆ. 2016 ರಲ್ಲಿ ಸಂಜೆವಾಣಿಯಲ್ಲಿ ಸಹಾಯಕ ವರದಿಗಾರರಾಗಿ ಪತ್ರಿಕೋದ್ಯಮ ವೃತ್ತಿ ಆರಂಭಿಸಿದರು.
ನಂತರ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ 2 ವರ್ಷ ಸಹಾಯಕ ವರದಿಗಾರನಾಗಿ ಹಾಗೂ 2 ವರ್ಷ ಜಿಲ್ಲಾ ವರದಿಗಾರನಾಗಿ ನಾಲ್ಕು ವರ್ಷಕಾಲ ಸೇವೆ ಸಲ್ಲಿಸಿದ್ದಾರೆ. 2024 ರ ಡಿಸೆಂಬರ್ನಿಂದ ವಿಜಯವಾಣಿ ದಿನಪತ್ರಿಕೆಯಲ್ಲಿ ಜಿಲ್ಲಾವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ರಾಯಚೂರು ರಿಪೋರ್ಟರ್ಸ್ ಗಿಲ್ಡ್ನ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Contact : 9741490731
Email ID : rachuswamy1995@gmail.com
