ಹಿರಿಯ ಪತ್ರಕರ್ತ ದಿ. ಸೈಯದ್ ಅಶ್ರಫ್ ಕುಟುಂಬಕ್ಕೆ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನಿಂದ 1 ಲಕ್ಷ ರೂ. ನೆರವು
ರಿಪೋರ್ಟರ‌್ಸ್ ಗಿಲ್ಡ್ ಕಾರ್ಯ ಶ್ಲಾಘನೀಯ – ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ರಾಯಚೂರು, ಫೆ.16: ಇತ್ತೀಚೆಗೆ ನಿಧನರಾದ ರಾಯಚೂರಿನ ಹಿರಿಯ ಪತ್ರಕರ್ತ ಸೈಯದ್ ಅಶ್ರಫ್ ಅವರ ಕುಟುಂಬಕ್ಕೆ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್‌ನ ಪತ್ರಕರ್ತರ ತುರ್ತು ನಿಧಿಯಿಂದ 1 ಲಕ್ಷ ರೂಪಾಯಿ ಚೆಕ್ ವಿತರಿಸಲಾಯಿತು. ನಗರದ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಮೃತರ ಕುಟುಂಬಕ್ಕೆ 1 ಲಕ್ಷ…



















