ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ: ರಾಯಚೂರು ತಂಡಕ್ಕೆ ದ್ವಿತೀಯ ಸ್ಥಾನ
ರಾಯಚೂರು/ಶಿವಮೊಗ್ಗ ಜ.19: ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಅಂತರಜಿಲ್ಲಾ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ಪತ್ರಕರ್ತರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ ರಾಯಚೂರು ತಂಡ ಉತ್ತಮ ಪ್ರದರ್ಶನ ನೀಡಿ ಎರಡನೇ ಬಹುಮಾನ ಪಡೆದಿದೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ ತಂಡ ಹಾಗೂ ರಾಯಚೂರು ರಿಪೋರ್ಟರ‌್ಸ್ ಗಿಲ್ಡ್ ತಂಡ ಫೈನಲ್‌ಗೆ ತಲುಪಿದ್ದವು. ಅಂತಿಮ ಹಣಾಹಣಿಯಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ತಂಡ ಗೆದ್ದು…





