ಪತ್ರಕರ್ತರ ತುರ್ತು ನಿಧಿ

ರಾಯಚೂರು ಜಿಲ್ಲಾ ಉತ್ಸವ 2026

ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆ

  ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆ ರಾಯಚೂರು ಜ21: ವಿಜ್ಞಾನ ತಂತ್ರಜ್ಞಾ‌ನ ಹಾಗೂ ಸಣ್ಣನೀರಾವರಿ ಸಚಿವ ಎನ್.ಎಸ್.ಬೋಸರಾಜುರಿಂದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ 2026ರ ಕಾರ್ಯಕ್ರಮಗಳ ವೇಳಾಪಟ್ಟಿ, ಬ್ಯಾನರ್, ಪೋಸ್ಟರ್, ಬಲೂನ್, ಪಾಂಪ್ಲೆಟ್‌ಗಳು, ಪಾಸ್ ಹಾಗೂ ಸಾಮಾಜಿಕ ಜಾಲತಾಣಗಳ ಬಿಡುಗಡೆ. ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇಳಾಪಟ್ಟಿ ಬಿಡುಗಡೆ. ಈ ವೇಳೆ ಜಿಲ್ಲಾಧಿಕಾರಿ ನಿತೀಶ್ ಕೆ.‌ ಸೇರಿ ಇತರ ಅಧಿಕಾರಿಗಳು, ಹಲವಾರು…

ರಾಯಚೂರು ಜಿಲ್ಲಾ ಉತ್ಸವ ಮುಂದೂಡಿಕೆ

ರಾಯಚೂರು: ಜನವರಿ‌ 29, 30 ಮತ್ತು 31 ರಂದು ನಿಗದಿಯಾಗಿದ್ದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವನ್ನ ಫೆಬ್ರವರಿ 6,7 ಮತ್ತು 8 ಕ್ಕೆ ಮುಂದೂಡಲಾಗಿದೆ. ಜಿಲ್ಲಾಧಿಕಾರಿಗಳ ಮೌಖಿಕ ಆದೇಶ ಹಿನ್ನೆಲೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿ ಮಾಹಿತಿ ನೀಡಿದ್ದಾರೆ.

ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ರ ಪೂರ್ವಭಾವಿ ಸಭೆ

ರಾಯಚೂರು ಜ.8. : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ರ ಪೂರ್ವಭಾವಿ ಸಭೆಯನ್ನು ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆಸಲಾಯಿತು. ಸಾಹಿತಿಗಳು, ಪತ್ರಕರ್ತರು, ಸಂಘ ಸಂಸ್ಥೆಗಳ ಮುಖ್ಯಸ್ಥರು, ವ್ಯಾಪಾರಸ್ಥರು, ಬುದ್ದಿಜೀವಿಗಳು, ಮಹಿಳಾ ಪ್ರಮುಖರು, ಹೋರಾಟಗಾರರು ಸಭೆಯಲ್ಲಿ ಜಿಲ್ಲಾ ಉತ್ಸವ ಯಶಸ್ಸಿಗೆ ಸಲಹೆ ನೀಡಿದರು. ಜಿಲ್ಲಾಧಿಕಾರಿ ನಿತೀಶ್ ಕೆ. ,ಮಹಾನಗರ ಪಾಲಿಕೆ ಪೌರಾಯುಕ್ತ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ,ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಸೇರಿ…

ರಾಯಚೂರು ಉತ್ಸವ: ಎರಡು ದಿನಗಳ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ರಾಯಚೂರು ಜ. 08: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ ಹಿನ್ನೆಲೆ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಚಾಲನೆ ನೀಡಿದರು. ಪುರುಷರಿಗೆ ಪುಟ್‌ಬಾಲ್, ವಾಲಿಬಾಲ್, ಕಬಡ್ಡಿ, ಕ್ರಿಕೆಟ್, ಬ್ಯಾಸ್ಕೆಟ್‌ಬಾಲ್ ಇತರೆ ಗುಂಪು ಕ್ರೀಡೆಗಳು ಹಾಗೂ ವೈಯಕ್ತಿಕ ಕ್ರೀಡೆಗಳಾದ ಚೆಸ್, ಓಟ, ಈಜು, ಗುಂಡು ಎಸೆತ ಸೇರಿದಂತೆ ಇತರ…

ರಾಯಚೂರು ಜಿಲ್ಲಾ ಕ್ರೀಡೋತ್ಸವಕ್ಕೆ ಚಾಲನೆ

ರಾಯಚೂರು ಜಿಲ್ಲಾಡಳಿತದಿಂದ ಜನವರಿ 29, 30 ,31ರಂದು ಮೂರು ದಿನ ಕಾಲ ರಾಯಚೂರು ಜಿಲ್ಲಾ ಉತ್ಸವ ಹಮ್ಮಿಕೊಳ್ಳಲಾಗಿದೆ.‌ ಜಿಲ್ಲಾ ಉತ್ಸವದ ಅಂಗವಾಗಿ ಕ್ರೀಡೋತ್ಸವದ ಮೊದಲ ಕ್ರಿಕೆಟ್ ಪಂದ್ಯಕ್ಕೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಎನ್.ಎಸ್.ಬೋಸರಾಜು ಚಾಲನೆ ನೀಡಿದರು. ರಾಯಚೂರು ಉತ್ಸವದ ಪ್ರಚಾರಾರ್ಥ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರ ಇಲಾಖೆ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.